ಕರ್ನಾಟಕ KSRTC ಟ್ರೇಡ್‌ ಮಾರ್ಕ್‌ ಬಳಸಲು ಯಾವುದೇ ಅಡ್ಡಿ ಇಲ್ಲ | ಕೇರಳ ಆಕ್ಷೇಪಣಾ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌‌ |

December 16, 2023
4:05 PM

ಕೆಎಸ್ಸಾರ್ಟಿಸಿ(KSRTC) ಟ್ರೇಡ್‌ ಮಾರ್ಕ್‌(trade mark) ಹಲವು ವರ್ಷಗಳಿಂದ ಇದು ನಮ್ಮದು, ಇದು ನಮ್ಮದು ಎಂಬ ಹಗ್ಗಜಗ್ಗಾಟ ಕೇರಳ(Kerala) ಹಾಗೂ ನಮ್ಮ ಕರ್ನಾಟಕದ(Karnataka) ಮಧ್ಯೆ ನಡೆಯುತ್ತಲೇ ಇತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಕೆಎಸ್ಸಾರ್ಟಿಸಿ ಟ್ರೇಡ್‌ ಮಾರ್ಕ್‌ ಬಳಸಲು ಅನುಮತಿಸಬಾರದು ಎಂದು ಕೇರಳ ರಾಜ್ಯ ಆರ್‌ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌(Madras High court) ವಜಾಗೊಳಿಸಿದ್ದು(dismissed), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಯಾವುದೇ ಕಾನೂನಿನ ಸಮಸ್ಯೆಯಿಲ್ಲದೆ ಕೆಎಸ್ಸಾರ್ಟಿಸಿ ಹೆಸರನ್ನು ಬಳಸಬಹುದಾಗಿದೆ.

Advertisement
Advertisement
Advertisement
Advertisement

ಈ ಕುರಿತು ಕೇರಳ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕೆಎಸ್ಸಾರ್ಟಿಸಿ ಹೆಸರು ಬಳಕೆ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ಕೇರಳ ಆರ್ಟಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಕೆಎಸ್‌ಆರ್‌ಟಿಸಿ ಎಂಬ ಟ್ರೇಡ್‌ ಮಾರ್ಕ್‌ ಬಳಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ.

Advertisement

ಕೇರಳ ಮತ್ತು ಕರ್ನಾಟಕ ರಾಜ್ಯಗಳು ತಮ್ಮ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸಾರಿಗೆ ನಿಗಮಗಳಿಗೆ ಕ್ರಮವಾಗಿ 1965 ಮತ್ತು 1973 ರಿಂದ KSRTC ಎಂಬ ಸಂಕ್ಷೇಪಣವನ್ನು ಬಳಸುತ್ತಿವೆ. ಕರ್ನಾಟಕವು 1973ರಿಂದ ಕೆಎಸ್‌ಆರ್‌ಟಿಸಿ ಲೋಗೊ ಬಳಸುತ್ತಿರುವ ಬಗ್ಗೆ ದಾಖಲೆಗಳನ್ನು ಚೆನ್ನೈ ಟ್ರೇಡ್‌ ಮಾರ್ಕ್‌ ನೋಂದಣಿ ಅಧಿಕಾರಿಗೆ ಸಲ್ಲಿಸಿ 2013ರಲ್ಲಿ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಪಡೆದಿತ್ತು. ಇದಲ್ಲದೆ ಭಾರತ ಸರಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್ಸಾರ್ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಸಹ ಪಡೆದಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (ಇಂಟಲೆಕ್ಚುವಲ್‌ ಪ್ರಾಪರ್ಟಿ ಅಪೀಲ್‌ ಬೋರ್ಡ್‌)  ಮುಂದೆ ಇದನ್ನು ಪ್ರಶ್ನಿಸಿತ್ತು. ಆದರೆ ಕೇಂದ್ರ ಸರ್ಕಾರವು ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯನ್ನು ರದ್ದುಗೊಳಿಸಿ ಅಲ್ಲಿರುವ ಪ್ರಕರಣಗಳನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾಯಿಸಿತ್ತು.

1937ರಿಂದ ತಿರುವಾಂಕೂರು ರಾಜ್ಯ ಸಾರಿಗೆ ಸಂಸ್ಥೆಯಿದ್ದು, ಕೇರಳ ರಾಜ್ಯ ಉದಯವಾದ ಬಳಿಕ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು.  42 ವರ್ಷಗಳಿಂದ ಕೇರಳ ರಾಜ್ಯ ಆರ್‌ಟಿಸಿಯು ಕೆಎಸ್‌ಆರ್‌ಟಿಸಿ ಬಳಸುತ್ತಿರುವುದರಿಂದ ಕರ್ನಾಟಕದ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಅಮಾನ್ಯಗೊಳಿಸಬೇಕು ಎಂದು ಕೋರ್ಟ್‌ನಲ್ಲಿ ವಾದಿಸಿತ್ತು.

Advertisement

ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದ ಮದ್ರಾಸ್ ಹೈಕೋರ್ಟ್‌, ಉಭಯ ರಾಜ್ಯಗಳ ವಾದ–ಪ್ರತಿವಾದ ಆಲಿಸಿ ಕೇರಳದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕದ ವಾದವನ್ನು ಎತ್ತಿ ಹಿಡಿದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್ಸಾರ್ಟಿಸಿ ಅಧಿಕಾರಿಗಳು, ಕೇರಳ ರಾಜ್ಯ ಕೆಎಸ್‌ಆರ್‌ಟಿಸಿ ಬಳಕೆ ಮಾಡುವುದನ್ನು ನಾವು ಆಕ್ಷೇಪಿಸಿಲ್ಲ. ಆದರೆ ಅವರು ಆಕ್ಷೇಪಣೆ ಸಲ್ಲಿಸಿದ್ದು, ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿದೆ. ಈಗ ನಮಗೆ ಯಾವುದೇ ಕಾನೂನಿನ ತಡೆಯಿಲ್ಲ ಎಂದು ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

The Madras High court dismissed the plea filed by Kerala State RTC that the Karnataka State Road Transport Corporation should not be allowed to use the KSRTC trade mark, and the Karnataka State Road Transport Corporation can now use the KSRTC name without any legal problem.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror