ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ತೀರ್ಮಾನಕ್ಕೆ ಬರಲಾಗಿದ್ದು ಆದರೆ ಸಾರ್ವಜನಿಕವಲಯದಲ್ಲಿ ಟೀಕೆ ಬಂದಿದ್ದರಿಂದ ತಮ್ಮ ನಿಲುವನ್ನು ಬದಲಿಸಿಕೊಂಡ ಮುಖ್ಯಮಂತ್ರಿಗಳು ಹಸಿರು ಪಟಾಕಿಯನ್ನು ಮಾತ್ರ ಬಳಸಬಹುದು ಎಂದು ಹೇಳಿಕೆ ನೀಡಿದರು.
ಪಟಾಕಿಯಿಂದ ಉಂಟಾಗುವ ವಾಯುಮಾಲಿನ್ಯದಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಹಾನಿಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದರು.ಕೊರೋನಾ ಸೋಂಕು ತಗುಲಿ ಗುಣಮುಖರಾಗಿರುವವರ ಆರೋಗ್ಯದ ದೃಷ್ಟಿಯಿಂದ ಪಟಾಕಿ ಸಿಡಿಸುವುದನ್ನು ನಿಷೇಧಿಸುವುದು ಒಳ್ಳೆಯದು. ಪಟಾಕಿ ಸಿಡಿಸುವುದರಿಂದ ಮಲಿವಾಗುವ ಗಾಳಿಯನ್ನು ಸೇವಿಸುವುದರಿಂದ ಈಗಾಗಲೇ ಸೋಂಕಿತರಾಗಿದ್ದು, ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದರು.