ದೀಪಾವಳಿಗೆ ಹಸಿರು ಪಟಾಕಿ ಬಳಕೆಗೆ ಸರಕಾರ ಮನವಿ | ಪಟಾಕಿ ನಿಷೇಧವಿಲ್ಲ

November 7, 2020
2:33 PM

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ತೀರ್ಮಾನಕ್ಕೆ ಬರಲಾಗಿದ್ದು ಆದರೆ  ಸಾರ್ವಜನಿಕವಲಯದಲ್ಲಿ ಟೀಕೆ ಬಂದಿದ್ದರಿಂದ  ತಮ್ಮ ನಿಲುವನ್ನು ಬದಲಿಸಿಕೊಂಡ ಮುಖ್ಯಮಂತ್ರಿಗಳು  ಹಸಿರು ಪಟಾಕಿಯನ್ನು ಮಾತ್ರ ಬಳಸಬಹುದು ಎಂದು ಹೇಳಿಕೆ ನೀಡಿದರು.

ಪಟಾಕಿಯಿಂದ ಉಂಟಾಗುವ ವಾಯುಮಾಲಿನ್ಯದಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಹಾನಿಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ತಜ್ಞರು ಸರಕಾರಕ್ಕೆ  ಶಿಫಾರಸು ಮಾಡಿದ್ದರು.ಕೊರೋನಾ ಸೋಂಕು ತಗುಲಿ ಗುಣಮುಖರಾಗಿರುವವರ ಆರೋಗ್ಯದ ದೃಷ್ಟಿಯಿಂದ ಪಟಾಕಿ ಸಿಡಿಸುವುದನ್ನು ನಿಷೇಧಿಸುವುದು ಒಳ್ಳೆಯದು. ಪಟಾಕಿ ಸಿಡಿಸುವುದರಿಂದ ಮಲಿವಾಗುವ ಗಾಳಿಯನ್ನು ಸೇವಿಸುವುದರಿಂದ ಈಗಾಗಲೇ ಸೋಂಕಿತರಾಗಿದ್ದು, ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror