ಇನ್ನು ಮುಂದೆ ಮಾಸ್ಕ್ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ ರೂ 500 ದಂಡ ವಿಧಿಸಲಾಗುತ್ತದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…