ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

April 26, 2023
9:36 PM

Advertisement
Advertisement
Advertisement

ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ.

Advertisement

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು. ಆದರೆ ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್‌ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.

 

Advertisement

ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ನೇರವಾಗಿ ಯುದ್ಧಕ್ಕೆ ಬರೋರು ನೀವೇ ಬನ್ನಿ, ಯಡಿಯೂರಪ್ಪರನ್ನು ಯಾಕೆ ನಡುವೆ ತರುತ್ತಿರಿ? 50-60 ಜನ ಲಿಂಗಾಯತರ ಜೊತೆಗೆ ಸೇರಿ ಸಭೆ ಮಾಡಿದರೆ ಇಡೀ ಲಿಂಗಾಯತ ಸಮುದಾಯದ ಸಭೆ ಆಗಲ್ಲ ಎಂದರು.

ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ. ಇವರೆಲ್ಲರೂ ಸೇರಿ ಸೆಂಟ್ರಲ್ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ
January 14, 2025
7:21 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |
January 13, 2025
1:18 PM
by: ಸಾಯಿಶೇಖರ್ ಕರಿಕಳ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror