ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕಾದ ಅಗತ್ಯವಿದೆ. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement