#Arecanut | ಭೂತಾನ್‌ ಅಡಿಕೆ ಆಮದು | ಬೆಳೆಗಾರರಿಗೆ ಆತಂಕ ಬೇಡ | ಕ್ಯಾಂಪ್ಕೋ ಭರವಸೆ |

August 7, 2023
9:54 PM
ಭೂತಾನ್‌ನಿಂದ ಹಸಿ ಅಡಿಕೆ ಆಮದು ಕಾರಣದಿಂದ ದೇಶೀಯ ಚಾಲಿ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು. ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಭೂತಾನ್‌ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಭೂತಾನ್‌ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.  ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ.  ಹೀಗಾಗಿ ಭೂತಾನ್‌ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್‌ ಕುಮಾರ್‌ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror