ಭೂತಾನ್‌ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್‌ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…