2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.
ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…