ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪರಿಷ್ಕರಣೆ ಇಲ್ಲ| ಶಿಕ್ಷಣ ಇಲಾಖೆಗೆ ಸಿಎಂ ಮೌಖಿಕ ಸೂಚನೆ | ವಿವಾದಿತ ಪಠ್ಯಗಳು ಬೋಧನೆಯಿಂದ ಹೊರಕ್ಕೆ

June 7, 2023
1:05 PM

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ಬದಲಿಸುವುದಾಗಿ ಹೇಳಿತ್ತು. ಅದರಂಂತೆ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ.

Advertisement
Advertisement

ಶಿಕ್ಷಣ ಸಚಿವ ಮಧು ಬಂಗಾರಪ್ಪ  ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕಂತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror