ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ಬದಲಿಸುವುದಾಗಿ ಹೇಳಿತ್ತು. ಅದರಂಂತೆ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕಂತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490