ಮದರಸಾಗಳಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನಿರ್ಬಂಧ

November 28, 2022
6:17 PM

ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್‌ ಗೆ ಈ ಬಾರಿ ತಡೆ ಹಾಕಿದೆ.

ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‍ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.

ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror