ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್ ಗೆ ಈ ಬಾರಿ ತಡೆ ಹಾಕಿದೆ.
ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‍ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.
ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…
ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…