ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ. ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.
ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.
ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿಯ ಸಭೆಯಲ್ಲಿ, ಬೀದಿ ನಾಯಿಗಳು / ಸಾಕು ಬೆಕ್ಕುಗಳಿಗೆ ನೋಯ್ಡಾ ಪ್ರಾಧಿಕಾರದ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನೋಯ್ಡಾ ಪ್ರದೇಶಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಾಧಿಕಾರವು ಈ ನೀತಿಯನ್ನು ನಿರ್ಧರಿಸಿದೆ ಎಂದು ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿತು ಮಹೇಶ್ವರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…