Advertisement
ವೆದರ್ ಮಿರರ್

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

Share

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಅಲ್ಪ ಪ್ರಮಾಣದ ಬಿಸಿಲು ಸಾಧ್ಯತೆಯೂ ಇದೆ. ಉಡುಪಿ ಜಿಲ್ಲೆಯ ಉತ್ತರ ಭಾಗದ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕರಾವಳಿಯಾದ್ಯಂತ ಮಳೆಯ ಜೊತೆಗೆ ಗಾಳಿಯೂ ಇರಬಹುದು. ಇದರಿಂದ ಮಳೆ ಒಮ್ಮೆಗೇ ಜೋರು ಬಂದು 5 – 10 ನಿಮಿಷಗಳಲ್ಲಿ ಕಡಿಮೆಯಾಗಬಹುದು. ಈಗಿನಂತೆ ಜುಲೈ 28ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆ(ಗಾಳಿಯೊಂದಿಗೆ) ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. (ಮಧ್ಯಾಹ್ನ ನಂತರ ಕಡಿಮೆ ಆಗಬಹುದು) ಉಳಿದ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29 ಅಥವಾ 30ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರಿನ ಕೊಡಗಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 29 ಅಥವಾ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸೂಚನೆಗಳಿವೆ

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

8 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

19 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

20 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

23 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago