26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಅಲ್ಪ ಪ್ರಮಾಣದ ಬಿಸಿಲು ಸಾಧ್ಯತೆಯೂ ಇದೆ. ಉಡುಪಿ ಜಿಲ್ಲೆಯ ಉತ್ತರ ಭಾಗದ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕರಾವಳಿಯಾದ್ಯಂತ ಮಳೆಯ ಜೊತೆಗೆ ಗಾಳಿಯೂ ಇರಬಹುದು. ಇದರಿಂದ ಮಳೆ ಒಮ್ಮೆಗೇ ಜೋರು ಬಂದು 5 – 10 ನಿಮಿಷಗಳಲ್ಲಿ ಕಡಿಮೆಯಾಗಬಹುದು. ಈಗಿನಂತೆ ಜುಲೈ 28ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆ(ಗಾಳಿಯೊಂದಿಗೆ) ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. (ಮಧ್ಯಾಹ್ನ ನಂತರ ಕಡಿಮೆ ಆಗಬಹುದು) ಉಳಿದ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29 ಅಥವಾ 30ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಕೊಡಗಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 29 ಅಥವಾ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸೂಚನೆಗಳಿವೆ
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…