08.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತಲಿನ ಪ್ರದೇಶಗಳ ಒಂದೆರಡು ಕಡೆ, ಕಡಿಮೆ ವ್ಯಾಪ್ತಿಯಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 7 ಹಾಗೂ 8ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, 9ರಿಂದ ಒಣ ಹವೆ ಮುಂದುವರಿಯಲಿದೆ.
ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಲಕ್ಷಣಗಳಿವೆ. ನವೆಂಬರ್ 9ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕರಾವಳಿಯ ಸಮೀಪ ತಲುಪಿದ ತಿರುವಿಕೆಯು ಇನ್ನೂ ಒಂದು ವಾರದ ಕಾಲ ಅಲ್ಲಿಯೇ ಮುಂದುವರಿಯುವ ಸಾಧ್ಯತೆಗಳಿದ್ದು, ಹಿಂಗಾರು ಮಾರುತಗಳನ್ನು ನಿಯಂತ್ರಿಸಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ…
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು…
ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ…
ಇಡೀ ಸಮುದಾಯ ಮತ್ತು ದೇಶದ ದೃಷ್ಠಿಯಿಂದ ನೋಡಿದರೆ ಅಕ್ಕಿಯನ್ನು ಬೆಳೆಸುವ ಕೃಷಿಕರನ್ನು ಪ್ರೋತ್ಸಾಹಿಸುವ…