Advertisement
ವೆದರ್ ಮಿರರ್

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

Share

11.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಕಾಲಾವಕಾಶ ಸಿಗುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.  ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

5 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

5 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

16 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

21 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

21 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

21 hours ago