ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?

July 11, 2025
4:50 PM

12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.ದಕ್ಷಿಣ ಒಳನಾಡಿನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಕಡಿಮೆಯಾಗಬಹುದು.

ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳು ಶ್ರೀಲಂಕಾ ಕರಾವಳಿ ಮೂಲಕ ಸಾಗಿಬಂದು ತಮಿಳುನಾಡು ಕರಾವಳಿಗೆ ನುಗ್ಗುತ್ತಿರುವುದರಿಂದ ತಮಿಳುನಾಡು ಭಾಗದಿಂದ ಬರುತ್ತಿರುವ ಮೋಡಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror