Advertisement
ವೆದರ್ ಮಿರರ್

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

Share

13.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು ಒಂದೆರಡು ಮಳೆ ಜಾಸ್ತಿ ಇರುವ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಧ್ಯಾಹ್ನ ನಂತರ ಅಥವಾ ಸಂಜೆಯಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ 15 ರ ತನಕ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಲಕ್ಷಣಗಳಿವೆ. ಜುಲೈ 14 ರಿಂದ ಮಳೆಯ ಮಧ್ಯ ಬಿಡುವು ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. 16 ರಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ದಿನದಲ್ಲಿ 2 ಅಥವಾ 3 ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 15ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಜುಲೈ 16ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜುಲೈ 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆಯಾಗಲಿದ್ದು, ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಬೀಳುತ್ತಿರುವ ಮಳೆಯು ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಇರಬಹುದು.
(ನಿನ್ನೆ ಇದೇ ರೀತಿ ಅಸಹಜ ಚಲನೆಯ ಕಾರಣದಿಂದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಿದ್ದಿರಬಹುದು.)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago