Advertisement
ವೆದರ್ ಮಿರರ್

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

Share

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಜುಲೈ 15 ರಂದು ಒಂದು ದಿನ ಮಳೆ ಕಡಿಮೆ ಇದ್ದರೂ 16 ರಿಂದ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 22 ರ ತನಕವೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಜುಲೈ 14ರಿಂದ ಮಳೆಯ ಪ್ರಮಾಣ ಕಡಿಮೆಯಾದರೂ, ಜುಲೈ 16 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗಗಳಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗಿದೆ. ಇದರಿಂದ ಮುಂಗಾರು ಮಳೆ ಉತ್ತರ ಭಾರತದ ಕಡೆ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

12 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

18 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

18 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

22 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago