14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಜುಲೈ 15 ರಂದು ಒಂದು ದಿನ ಮಳೆ ಕಡಿಮೆ ಇದ್ದರೂ 16 ರಿಂದ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 22 ರ ತನಕವೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 14ರಿಂದ ಮಳೆಯ ಪ್ರಮಾಣ ಕಡಿಮೆಯಾದರೂ, ಜುಲೈ 16 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗಗಳಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗಿದೆ. ಇದರಿಂದ ಮುಂಗಾರು ಮಳೆ ಉತ್ತರ ಭಾರತದ ಕಡೆ ಹೆಚ್ಚಾಗುವ ನಿರೀಕ್ಷೆ ಇದೆ.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…