ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |

July 14, 2025
1:02 PM

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಜುಲೈ 16 ರಿಂದ 20 ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಮಳೆಯ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜುಲೈ 16 ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror