ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |

July 30, 2025
8:27 PM
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಬದಲಾವಣೆ ಸಾಧ್ಯತೆ ಇದೆ.

31.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಸಿಲಿನ ತಾಪ ಹೆಚ್ಚಿರುವುದರಿಂದ ಗಾಳಿಯ ಸಾಧ್ಯತೆಯೂ ಇದೆ. ಕಾಸರಗೋಡು ರಾತ್ರಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು, ಆಗಸ್ಟ್ 1ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಆಗಸ್ಟ್ 4 ರ ನಂತರ ಮತ್ತೆ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಆಗಸ್ಟ್ 3ರ ವರೆಗೆ ಮುಂದುವರಿಯುವ ಸಾಧ್ಯತೆಗಳಿದ್ದು, 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಆಗಸ್ಟ್ 7 ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror