02.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಘಟ್ಟದ ಕೆಳಗಿನ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆ ಬಿಡುವು ಪಡೆಯುವ ಸಾಧ್ಯತೆಗಳಿದ್ದು, ಮೇ 6 ರಿಂದ ಮತ್ತೆ ಮಳೆ ಆರಂಭವಾಗಬಹುದು. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
Follow the The Rural Mirror channel on WhatsApp
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ, ಚಿಕ್ಕಮಗಳೂರಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
Follow the The Rural Mirror channel on WhatsApp
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೋಡಗಳನ್ನು ಹೊತ್ತೊಯ್ಯುವ ಮೇಲ್ಸ್ತರದ ಗಾಳಿಯ ದಿಕ್ಕನ್ನು ಒಂದು ನಿರ್ದಿಷ್ಟ ಸಮಯದವರೆಗೆ IMD ಅಥವಾ ಇತರ Appಗಳ ಮೂಲಕ ಅಂದಾಜು ಮಾಡಬಹುದು. ಅದು ಕೊನೆಯ ಘಳಿಗೆಯಲ್ಲಿ ಬದಲಾಗುತ್ತದೆ. ಆದರೆ ಕೆಳಸ್ತರದ ಅಂದರೆ ಭೂಮಿ ಮಟ್ಟದ ಗಾಳಿಯನ್ನು ಮಳೆ ಆರಂಭವಾಗುವ ಸಮಯದಲ್ಲಿ ಅಂದಾಜಿಸುವ ಯಾವುದೇ ನಿರ್ದಿಷ್ಟ ಸಾಧನಗಳು ಈವರೆಗೆ ಬಂದಿರುವುದಿಲ್ಲ.
Follow the The Rural Mirror channel on WhatsApp