ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

May 4, 2025
11:59 AM
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 6 ರ ನಂತರ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

05.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : 

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೊಡದ ವಾತಾವರಣ ಇರಬಹುದು. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಹವಾಮಾನ ಮಾಹಿತಿಯ  Update ಪಡೆಯಲು “ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 6 ರ ನಂತರ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಹವಾಮಾನ ಮಾಹಿತಿಯ  Update ಪಡೆಯಲು “ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror