05.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೊಡದ ವಾತಾವರಣ ಇರಬಹುದು. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 6 ರ ನಂತರ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜ ಚನ್ನ ಬೋಂಡಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…