11.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ ಗುಡುಗು ಸಹಿತ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು, ಮೇ14ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಮೇ 14ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 17ರ ತನಕವೂ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮೇ 11ರಿಂದ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಅರಬ್ಬಿ ಸಮುದ್ರದ ಭಾಗದಿಂದ ಬೀಸುತ್ತಿರುವ ಮುಂಗಾರು ರೀತಿಯ ಗಾಳಿಯ ಪ್ರಭಾವ ಹಾಗೂ ಪ್ರಮಾಣ ಹೆಚ್ಚಾಗುತ್ತಿದೆ. ತಾತ್ಕಾಲಿಕ ಇರಬಹುದು.
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…