ವೆದರ್ ಮಿರರ್

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

15.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ, ಕೇರಳ – ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ, ಉಡುಪಿ, ದಕ್ಷಿಣ ಕನ್ನಡ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ಪ್ರವೇಶದ ಪೂರ್ವ ಅಂದರೆ ಮುಂಗಾರು ಪ್ರಭಾವದಿಂದ ಮೇ18 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 15ರಿಂದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಮೇ 21ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಮೇಲಿನ ವಿಡಿಯೋ ನಕ್ಷೆಯಲ್ಲಿ ಕಾಣುವಂತೆ ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26 ಅಥವಾ 27ರಂದು ಕೇರಳ ಹಾಗೂ ಅದೇ ಸಮಯದಲ್ಲಿ ರಾಜ್ಯಕ್ಕೂ ಪ್ರವೇಶಿಸುವ ವರದಿಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…

7 minutes ago

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?

1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…

38 minutes ago

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…

11 hours ago

ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…

11 hours ago

ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…

11 hours ago

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…

21 hours ago