Advertisement
ವೆದರ್ ಮಿರರ್

ಹವಾಮಾನ ವರದಿ | 02-08-2025 | ಮುಂಗಾರು ದುರ್ಬಲ | ಆ.4 ರಿಂದ ಮತ್ತೆ ಮಳೆ ಸಾಧ್ಯತೆ |

Share

03.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 4 ರಿಂದ ಉತ್ತರ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿದ್ದು, ಆಗಸ್ಟ್ 5 ರಿಂದ 8ರ ತನಕ ಉತ್ತಮ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 6ರಿಂದ 8ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಮೈಸೂರು ಜಿಲ್ಲೆಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಆಗಸ್ಟ್ 4 ರಿಂದ ಆಗಸ್ಟ್ಮ 8ರ ತನಕ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕೊಪ್ಪಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು ಹೆಚ್ಚಿನ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಲು ಆರಂಭವಾಗಿದ್ದು, ಅರಬ್ಬಿ ಸಮುದ್ರದ ಕಡೆಯಿಂದ ಸಾಗುವ ಮುಂಗಾರು ಮಾರುತಗಳು ಹಾಗೂ ಬಂಗಾಳ ಕೊಲ್ಲಿಯ ಭಾಗದಿಂದ ಬೀಸುವ ಗಾಳಿಯು, ಪಶ್ಚಿಮ ಕರಾವಳಿಯಲ್ಲಿ ಸಂಧಿಸುವುದರಿಂದ, ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 4 ಅಥವಾ 5 ದಿವಸಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

21 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

21 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago