Advertisement
ವೆದರ್ ಮಿರರ್

ಹವಾಮಾನ ವರದಿ | 06-08-2025 | ಬಿಸಿಲು-ಮೋಡ-ಮಳೆ ಮುಂದಿನ 10 ದಿನಗಳ ಕಾಲ

Share

07.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿಗೆ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.  ಕೇರಳ ಕರಾವಳಿಯಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕನ್ನಡ, ಉಡುಪಿ ಕರಾವಳಿಯಲ್ಲಿದ್ದು ಸಂಜೆ ಶಿಥಿಲಗೊಳ್ಳಲಿದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡ   ವಾತಾವರಣದೊಂದಿಗೆ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ದಿನದಲ್ಲಿ ಒಂದೆರಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇವತ್ತು ತಡ ರಾತ್ರಿ ಅಥವಾ ನಾಳೆ ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಅಲ್ಲಲ್ಲಿ ತುಂತುರು ಮಾತ್ರ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

12 minutes ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

16 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

1 day ago