08.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 12 ರಿಂದ ಒಂದು ವಾರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 8 ಹಾಗೂ 9 ರಂದು ಮಳೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…