Advertisement
ಸುದ್ದಿಗಳು

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

Share

12.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 14ರ ತನಕವೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 15 ರಿಂದ 20ರ ತನಕ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 16 ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 17 ರಿಂದ 19 ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಗದಗ, ದಾವಣಗೆರೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಅಂದ್ರಾ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಆಗಸ್ಟ್ 12 ರಿಂದ ಉತ್ತರ ಒಳನಾಡು ಭಾಗಗಳಲ್ಲಿ, ಆಗಸ್ಟ್ 19ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 17ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ 16ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

21 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

21 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

21 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago