Advertisement
ವೆದರ್ ಮಿರರ್

ಹವಾಮಾನ ವರದಿ | 28-08-2025 | ಇನ್ನೂ ಎಷ್ಟು ದಿನ ಇದೆ ಈ ಮಳೆ..?

Share

29.08.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 29 ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 30 ರಿಂದ ಮಳೆ ಸ್ವಲ್ಪ ಕಡಿಮೆಯಾದರೂ ಸಾಮಾನ್ಯ ಮಳೆ ಸೆಪ್ಟೆಂಬರ್ 4 ರ ತನಕ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ ಈ ಮಳೆಯು 29 ರ ತನಕ ಇರುವ ಸಾಧ್ಯತೆಗಳಿದ್ದು, 30 ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಒಂದೆರಡು ಕಡೆ ಸಾಮಾನ್ಯ ಮಳೆ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 29 ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಆಗಸ್ಟ್ 31ರ ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ದಿಂದ, ಮಧ್ಯಪ್ರದೇಶ, ಮಹಾರಾಷ್ಟ್ರ ತನಕ ವ್ಯಾಪಿಸಿದ್ದು, ಸೆಪ್ಟೆಂಬರ್ 3, 4 ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

7 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

8 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

8 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

8 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago