29.08.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 29 ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 30 ರಿಂದ ಮಳೆ ಸ್ವಲ್ಪ ಕಡಿಮೆಯಾದರೂ ಸಾಮಾನ್ಯ ಮಳೆ ಸೆಪ್ಟೆಂಬರ್ 4 ರ ತನಕ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ ಈ ಮಳೆಯು 29 ರ ತನಕ ಇರುವ ಸಾಧ್ಯತೆಗಳಿದ್ದು, 30 ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಒಂದೆರಡು ಕಡೆ ಸಾಮಾನ್ಯ ಮಳೆ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 29 ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಆಗಸ್ಟ್ 31ರ ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ದಿಂದ, ಮಧ್ಯಪ್ರದೇಶ, ಮಹಾರಾಷ್ಟ್ರ ತನಕ ವ್ಯಾಪಿಸಿದ್ದು, ಸೆಪ್ಟೆಂಬರ್ 3, 4 ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…