ಹವಾಮಾನ ವರದಿ | 06-09-2025 | ಮಳೆಯ ಸಾಧ್ಯತೆ ಎಲ್ಲೆಲ್ಲಾ ಇದೆ..? ಭಾರೀ ಮಳೆ ಎಲ್ಲಿ..?

September 6, 2025
2:56 PM
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.

07.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ.  ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆ ಇರಬಹುದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಮಲೆನಾಡು ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.

ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಗುಜರಾತ್, ರಾಜಸ್ತಾನ ಗಡಿ ಭಾಗಗಳಿಗೆ ತಲುಪಿದ್ದು, ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ತಮಿಳುನಾಡು ಮೂಲಕ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror