ಹವಾಮಾನ ವರದಿ | 09-09-2025 | ಕರಾವಳಿ-ಮಲೆನಾಡಲ್ಲಿ ಮಳೆ ಕಡಿಮೆ – ಒಳನಾಡಿನಲ್ಲಿ ಮಳೆ ಯಾವಾಗ..?

September 9, 2025
1:48 PM
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12 ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14 ರ ತನಕ ಮಳೆಯ ಮುನ್ಸೂಚನೆ ಇದೆ.  ಸುಮಾರು ಸೆಪ್ಟೆಂಬರ್ 15 ರಂದು ಈ ವಾಯುಭಾರ ಕುಸಿತವು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.

10.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು, ಅಲ್ಲಲ್ಲಿ ಆಗಾಗ ಸ್ವಲ್ಪ ಮೋಡದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಮುಂದಿನ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೆ ಸೆಪ್ಟೆಂಬರ್ 10ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 10ರಂದು ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ದಕ್ಷಿಣ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 11ರಿಂದ ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಬಹುದು. ಆಗಾಗ ಸ್ವಲ್ಪ ಬಿಸಿಲು ಕಾಣಬಹುದು.

ಒಳನಾಡು : ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಸಿಂದಗಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12 ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.  ಸುಮಾರು ಸೆಪ್ಟೆಂಬರ್ 15ರಂದು ಈ ವಾಯುಭಾರ ಕುಸಿತವು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror