11.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಸೆಪ್ಟೆಂಬರ್ 12 ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಸೆಪ್ಟೆಂಬರ್ 14 ರಿಂದ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕುಗೊಂಡು ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 12 ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಒಳನಾಡು : ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 11 ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸುಮಾರು ಸೆಪ್ಟೆಂಬರ್ 15 ರಂದು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರಮೂಲಕ ಸಾಗಿ ಮಹಾರಾಷ್ಟ್ರದ ರತ್ನಗಿರಿ, ಮುಂಬೈ ಮಧ್ಯ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…