Advertisement
ವೆದರ್ ಮಿರರ್

ಹವಾಮಾನ ವರದಿ | 12-09-2025 | ಮುಂದಿನ ವಾರ ಮಳೆ ಇದೆ… ಎಲ್ಲೆಲ್ಲಿ ಮಳೆ ಇರಬಹುದು..?

Share

13.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉಳಿದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 14 ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯನಗರ, ದಾವಣಗೆರೆ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು (ಪಾವಗಢ ಸಹಿತ) ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 12ರಿಂದ 2 ದಿವಸಗಳ ಕಾಲ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 14 ಅಥವಾ 15 ರಂದು ಮತ್ತೆ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಸುಮಾರು ಸೆಪ್ಟೆಂಬರ್ 15ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

7 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

7 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

8 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

8 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

8 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago