ಹವಾಮಾನ ವರದಿ | 15-09-2025 | ಮೋಡ-ಬಿಸಿಲು-ಮಳೆ- ಸೆ.23 ರವರೆಗೆ ಇದೇ ವಾತಾವರಣ ಸಾಧ್ಯತೆ

September 15, 2025
3:50 PM
ವಾಯುಭಾರ ಕುಸಿತದ ಪರಿಣಾಮದಿಂದ ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

16.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 23 ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಿಲ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 23 ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ….

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.  ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರಿನ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 17 ರ ತನಕ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.

ವಾಯುಭಾರ ಕುಸಿತದ ಪರಿಣಾಮದಿಂದ ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror