16.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 23 ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಿಲ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 23 ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ….
ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರಿನ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 17 ರ ತನಕ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ವಾಯುಭಾರ ಕುಸಿತದ ಪರಿಣಾಮದಿಂದ ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ….
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…