13.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಜೂನ್ 13ರ ರಾತ್ರಿ ಈ ಚಲನೆಯು ಪಶ್ಚಿಮದಿಂದ ಪೂರ್ವಕ್ಕೆ ಅಥವಾ ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿವೆ. ಆಗ ಮಾತ್ರ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಬಹುದು.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯ ದಿಕ್ಕು ಬದಲಾಗುವ ಸಾಧ್ಯತೆಗಳಿರುವುದರಿಂದ ಕೊಡಗು ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಉತ್ತಮ ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಜೂನ್ 18ರ ತನಕ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…
ಹಲಸಿನಹಣ್ಣು ತಿಂದು ಉಸಿರಾಟದ ಮೂಲಕ ಆಲ್ಕೋಹಾಲ್ ಪತ್ತೆ ಮಾಡುವ ವೇಳೆ ಯಂತ್ರಕ್ಕೆ ಒಳಪಟ್ಟ…
ಆಟಿ ಅಂದರೆ ಪ್ರಕೃತಿಯ ಒಳತಿರುಳು. ಪ್ರಕೃತಿಯನ್ನು ಅರ್ಥ ಮಾಡಿಕೊಳ್ಳಲು ಹಾಗೂ ಪ್ರಕೃತಿಯ ಪರಿಣಾಮಗಳನ್ನು…