Advertisement
ವೆದರ್ ಮಿರರ್

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

Share

13.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.  ಆದರೆ ಗಾಳಿಯ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಜೂನ್ 13ರ ರಾತ್ರಿ ಈ ಚಲನೆಯು ಪಶ್ಚಿಮದಿಂದ ಪೂರ್ವಕ್ಕೆ ಅಥವಾ ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿವೆ. ಆಗ ಮಾತ್ರ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಬಹುದು.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯ ದಿಕ್ಕು ಬದಲಾಗುವ ಸಾಧ್ಯತೆಗಳಿರುವುದರಿಂದ ಕೊಡಗು ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಉತ್ತಮ ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಜೂನ್ 18ರ ತನಕ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

10 hours ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

14 hours ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

17 hours ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

17 hours ago

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ

ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…

1 day ago

ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ…

1 day ago