ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

September 18, 2025
1:38 PM
ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಪೂರ್ವದ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

19.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿ ಅಂತಿದ್ದರೂ ಗಾಳಿಯ ಚಲನೆ ನಿಧಾನವಾಗಿದ್ದರಿಂದ ಮತ್ತು ನಿಖರ ದಿಕ್ಕು ಇಲ್ಲದಿದ್ದರಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.  ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

ಒಳನಾಡು : ಬಾಗಲಕೋಟೆ, ಗದಗ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಆದರೆ ಗಾಳಿಯ ಚಲನೆ ನಿಖರ ದಿಕ್ಕಿನಲ್ಲಿ ಇಲ್ಲದ್ದರಿಂದ ಹಾಗೂ ಪೂರ್ವದ ಗಾಳಿಯ ಪ್ರಭಾವದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿಯೂ ಪೂರ್ವದ ಗಾಳಿಯು ಪ್ರಭಾವದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಸೆಪ್ಟೆಂಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಪೂರ್ವದ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror