ಹವಾಮಾನ ವರದಿ | 26-09-2025 | ವಾಯುಭಾರ ಕುಸಿತದ ಪರಿಣಾಮ ಏನಾಗುತ್ತಿದೆ..?

September 26, 2025
2:05 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

27.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಈಗಿನಂತೆ ಈ ರೀತಿಯ ಸಾಮಾನ್ಯ ಮಳೆಯು ಅಕ್ಟೊಬರ್ 4 ಅಥವಾ 5 ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 30ರಿಂದ 3 ದಿವಸಗಳ ಕಾಲ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 27ರ ತನಕ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror