ಹವಾಮಾನ ವರದಿ | 30-09-2025 | ಸದ್ಯ ಕೆಲವು ಕಡೆ ಗುಡುಗು-ಮಳೆ | ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ

September 30, 2025
2:38 PM
ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗಿದ್ದು, ಸುಮಾರು ಅಕ್ಟೊಬರ್ 3ರ ಸಮಯದಲ್ಲಿ ಪಶ್ಚಿಮ ಬಂಗಾಳ ಪ್ರವೇಶಿಸುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಉತ್ತರ ಗುಜರಾತ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.

01.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಉಳಿದ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಅಕ್ಟೊಬರ್ 3ರ ತನಕ ಮುಂದುವರಿಯಲಿದ್ದು, 4ರಂದು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಅಕ್ಟೊಬರ್ 2ರ ತನಕ ಮುಂದುವರಿಯಲಿದ್ದು, 3 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 25ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗಿದ್ದು, ಸುಮಾರು ಅಕ್ಟೊಬರ್ 3ರ ಸಮಯದಲ್ಲಿ ಪಶ್ಚಿಮ ಬಂಗಾಳ ಪ್ರವೇಶಿಸುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಉತ್ತರ ಗುಜರಾತ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror