01.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಉಳಿದ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಅಕ್ಟೊಬರ್ 3ರ ತನಕ ಮುಂದುವರಿಯಲಿದ್ದು, 4ರಂದು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಅಕ್ಟೊಬರ್ 2ರ ತನಕ ಮುಂದುವರಿಯಲಿದ್ದು, 3 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 25ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗಿದ್ದು, ಸುಮಾರು ಅಕ್ಟೊಬರ್ 3ರ ಸಮಯದಲ್ಲಿ ಪಶ್ಚಿಮ ಬಂಗಾಳ ಪ್ರವೇಶಿಸುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಉತ್ತರ ಗುಜರಾತ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…