ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

June 13, 2025
1:47 PM
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

14.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 14 ರಿಂದ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18ರ ತನಕ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜೂನ್ 18 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು ಉತ್ತರ ಭಾಗ ಹಾಗೂ ದಕ್ಷಿಣ ಮಹಾರಾಷ್ಟ್ರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ನಂತರ ಮುಂಗಾರು ಯಥಾಸ್ಥಿತಿಗೆ ಮರಳುವ ಸಾಧ್ಯತೆಯಿದೆ. ( ನೈರುತ್ಯದಿಂದ ಈಶಾನ್ಯಕ್ಕೆ).

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror