15.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ಮೋಡಗಳ ಚಲನೆಯು ಸಾಂಪ್ರದಾಯಿಕ ಹಾದಿಗೆ ಮರಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಹಾಸನ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು. ಜೂನ್ 18 ರಿಂದ ತುಂತುರು ಮಳೆಯ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಜೂನ್ 19ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…