ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

June 17, 2025
11:58 AM

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18 ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19 ರಿಂದ 21 ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 18 ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಜೂನ್ 18 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror